ದಾವಣಗೆರೆ: ಅಡಿಕೆ‌ಗೆ ಭರ್ಜರಿ ಬೆಲೆ; 56 ಸಾವಿರ ಗಡಿ ದಾಟಿದ ದರ; ಏ‌.9ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಮತ್ತೆ ಭರ್ಜರಿ ಏರಿಕೆ ಕಂಡಿದೆ‌. ‌ಇಂದು (ಏ.9) ಗರಿಷ್ಠ ಬೆಲೆ 56,100 ರೂ.ಗೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ ದಿನದಿಂದ ದಿನಕ್ಕೆ ಭರ್ಜರಿ ಏರಿಕೆಯಾಗುತ್ತಿದೆ.

ದಾವಣಗೆರೆ: ನಿಮಗೆ ಕೃಷಿ ಪದವಿ ಬಗ್ಗೆ ಆಸಕ್ತಿ ಇದ್ಯಾ..? ಇಲ್ಲಿದೆ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಒಂದು ದಿನ ತರಬೇತಿ

  • ಏ.9ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 56,100
  • ಕನಿಷ್ಠ ಬೆಲೆ 52,512
  • ಸರಾಸರಿ ಬೆಲೆ 55,333
  • ಬೆಟ್ಟೆ ಅಡಿಕೆ ದರ
  • ಗರಿಷ್ಠ ಬೆಲೆ 25,786
  • ಕನಿಷ್ಠ ಬೆಲೆ 18,187
  • ಸರಾಸರಿ ಬೆಲೆ 22,722

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಏ.9ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 56,100. ಇದ್ದು, ಕನಿಷ್ಠ ಬೆಲೆ 52,512 ರೂ., ಸರಾಸರಿ ಬೆಲೆ 55,333 ರೂ.‌ಇದೆ.

ದಾವಣಗೆರೆ: 24 ಗಂಟೆಯೊಳಗೆ ಕೊಲೆ ಆರೋಪಿ ಪತ್ತೆ ಮಾಡಿದ ಶ್ವಾನದಳದ ತಾರಾ; ಆರೋಪಿ ಬಂಧನ

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಏಪ್ರಿಲಕ್ ನಲ್ಲಿ ಬಿಸಿಲು ಗರಿಷ್ಠ‌ಮಟ್ಟ ತಲುಪಿದೆ. ಇನ್ನಷ್ಟು ಏರಿಕೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ.‌ ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಇದೀಗ ಏಪ್ರಿಲ್ ನಲ್ಲಿ 56 ಸಾವಿರ ಗಡಿದಾಟಿ, 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts