Connect with us

Dvgsuddi Kannada | online news portal | Kannada news online

ದಾವಣಗೆರೆ: 61 ಸಾವಿರದತ್ತ ಅಡಿಕೆ ದರ ; ಏ‌.23ರ ರೇಟ್ ಎಷ್ಟಿದೆ..?

arecanut rate today

ದಾವಣಗೆರೆ

ದಾವಣಗೆರೆ: 61 ಸಾವಿರದತ್ತ ಅಡಿಕೆ ದರ ; ಏ‌.23ರ ರೇಟ್ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಭರ್ಜರಿ ಏರಿಕೆ ಕಂಡಿದೆ. ಈ ತಿಂಗಳ ಆರಂದಿಂದ ಸತತ ಏರಿಕೆ ಕಾಣುತ್ತಿದೆ. ಕಳೆದ 23ದಿನದಲ್ಲಿ 8 ಸಾವಿರದಷ್ಟು ದರ ಏರಿಕೆಯಾಗಿದೆ. ಇಂದು (ಏ.23) ಗರಿಷ್ಠ ಬೆಲೆ ಪ್ರತಿ ಕ್ವಿಂಟಲ್ ಗೆ 60,669 ರೂ.ಗೆ ಏರಿಕೆಯಾಗಿದೆ. ಈ ದರ ಏರಿಕೆ ರೈತರ ಮುಖದಲ್ಲಿ ಸಂತಸ ತಂದಿದೆ.

  • ಏ.23 ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 60,669
  • ಕನಿಷ್ಠ ಬೆಲೆ 54,769
  • ಸರಾಸರಿ ಬೆಲೆ 59,089
  • ಬೆಟ್ಟೆ ಅಡಿಕೆ ದರ
  • ಗರಿಷ್ಠ ಬೆಲೆ 33,679
  • ಕನಿಷ್ಠ ಬೆಲೆ 25,677
  • ಸರಾಸರಿ ಬೆಲೆ 28,420

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಏ.23ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 60,669 ಇದ್ದು, ಕನಿಷ್ಠ ಬೆಲೆ 54,769 ರೂ., ಸರಾಸರಿ ಬೆಲೆ 59,089 ರೂ.‌ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಏಪ್ರಿಲ್ ನಲ್ಲಿ ಬಿಸಿಲು ಗರಿಷ್ಠ‌ ಮಟ್ಟ ತಲುಪಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಸೇರಿದಂತೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ.‌ ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮಕೈಗೊಳ್ಳಬೇಕಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಇದೀಗ ಏಪ್ರಿಲ್ ನಲ್ಲಿ 61 ಸಾವಿರ ಗಡಿಯತ್ತ ಸಾಗುತ್ತಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top