Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರದಲ್ಲಿ ಮತ್ತೆ ಏರಿಕೆ; ಮೇ 26ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

arecanut rate today

ದಾವಣಗೆರೆ

ದಾವಣಗೆರೆ: ಅಡಿಕೆ ದರದಲ್ಲಿ ಮತ್ತೆ ಏರಿಕೆ; ಮೇ 26ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ‌ಮತ್ತೆ ಏರಿಕೆಯಾಗಿದೆ. ಇಂದು (ಮೇ 26) ರಾಶಿ ಅಡಿಕೆ ಗರಿಷ್ಠ ಬೆಲೆ ಪ್ರತಿ ಕ್ವಿಂಟಲ್ ಗೆ 59,512ರೂ.ಇದೆ.

ಮೇ 26 ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 59,512
  • ಕನಿಷ್ಠ ಬೆಲೆ 55,012
  • ಸರಾಸರಿ ಬೆಲೆ 57,713

ಬೆಟ್ಟೆ ಅಡಿಕೆ ದರ

  • ಗರಿಷ್ಠ ಬೆಲೆ 29,679
  • ಕನಿಷ್ಠ ಬೆಲೆ 29,679
  • ಸರಾಸರಿ ಬೆಲೆ 29,679

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ‌ ಮೇ 26ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 59,512 ಇದ್ದು, ಕನಿಷ್ಠ ಬೆಲೆ 55,012 ರೂ., ಸರಾಸರಿ ಬೆಲೆ 57,713 ರೂ.‌ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿನ ತಾಪಮಾನ ಕಡಿಮೆಯಾಗಿದ್ದು, ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಇನ್ನೇನು ಮಂಗಾರು ಮಳೆ ಪ್ರವೇಶಕ್ಕೆ ರೈತರು ಕಾಯುತ್ತಿದ್ದಾರೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಏಪ್ರಿಲ್ 23ರಂದು ಗರಿಷ್ಠ ಬೆಲೆ 60,669 ರೂ. ಇತ್ತು. ತಿಂಗಳ ಕೊನೆಯಲ್ಲಿ 59 ಸಾವಿರ ಒಳಗೆ ಬಂದಿತ್ತು. ಈಗ ಮೇ ತಿಂಗಳ ಆರಂಭದಲ್ಲಿ ಮತ್ತಷ್ಟು ಕುಸಿದು, ಇದೀಗ ಮತ್ತೆ 59,512 ರೂ. ಇದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top