ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಕಳೆದ ಒಂದು ವಾರದಿಂದ ಸ್ಥಿರವಾಗಿದೆ. ಇಂದು (ಜೂ.4) ಗರಿಷ್ಠ ಬೆಲೆ ಪ್ರತಿ ಕ್ವಿಂಟಲ್ ಗೆ 59,009 ರೂ.ಇದೆ.
ಜೂ.4ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
- ಗರಿಷ್ಠ ಬೆಲೆ 59,009
- ಕನಿಷ್ಠ ಬೆಲೆ 54,021
- ಸರಾಸರಿ ಬೆಲೆ 57,561
ಬೆಟ್ಟೆ ಅಡಿಕೆ ದರ
- ಗರಿಷ್ಠ ಬೆಲೆ 29,187
- ಕನಿಷ್ಠ ಬೆಲೆ 28,187
- ಸರಾಸರಿ ಬೆಲೆ 28,687
ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಜೂ.4ರಂದು ರಾಶಿ ಅಡಿಕೆ ಗರಿಷ್ಠ ಬೆಲೆ ಕ್ವಿಂಟಲ್ ಗೆ 59,009 ಇದ್ದು, ಕನಿಷ್ಠ ಬೆಲೆ 54,021 ರೂ., ಸರಾಸರಿ ಬೆಲೆ 57,561 ರೂ.ಇದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.
ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಏಪ್ರಿಲ್ 23ರಂದು ಗರಿಷ್ಠ ಬೆಲೆ 60,669 ರೂ. ಇತ್ತು. ಮೇ ತಿಂಗಳ 59,512 ರೂ.ಗೆ ಇಳಿದಿದ್ದು, ಜೂನ್ ಆರಂಭದಲ್ಲಿ 59,009 ಮತ್ತಷ್ಟು ದರ ಕಡಿತವಾಗಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.