ದಾವಣಗೆರೆ; ಅಡಿಕೆ‌ ದರದಲ್ಲಿ ಮತ್ತೆ ಭರ್ಜರಿ ಏರಿಕೆ; ಅಕ್ಟೋಬರ್ ಆರಂಭದಿಂದಲೂ ಏರುಮುಖ- 66 ಸಾವಿರ ಸಮೀಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಮತ್ತೆ ಭರ್ಜರಿ ಏರಿಕೆ ಕಂಡಿದೆ. ಪ್ರತಿ ದಿನ ಏರುಮುಖದಲ್ಲಿದ್ದು, ಅಕ್ಟೋಬರ್ ಆರಂಭದಿಂದ ಸತತ ಭರ್ಜರಿ ಏರಿಕೆ ಕಾಣುತ್ತಿದೆ. ಈ ವರ್ಷದಲ್ಲಿಯೇ ಇಂದು (ಅ.08) ಗರಿಷ್ಠ ರೇಟ್ ದಾಖಲಾಗಿದೆ‌. ಈ ಮೂಲಕ 66 ಸಾವಿರ ಗಡಿ ಸಮೀಪ ಬಂದಿದೆ.

ರೈತರು ಫುಲ್ ಖುಷ್

ಇಂದು (ಆ.08) ಗರಿಷ್ಠ ಬೆಲೆ 65,599 ರೂ. ತಲುಪಿದೆ. ಕಳೆದ ಒಂದು ವಾರದಿಂದ ದರ ಸತತವಾಗಿ ಏರಿಕೆಯಾಗುತ್ತಿದೆ. ರೈತರ (Farmer) ನಿರೀಕ್ಷೆ ಮೀರಿ ದರ ಏರಿಕೆ ಕಾಣುತ್ತಿದೆ. ಹಸಿ ಅಡಿಕೆ ದರ ಸಹ ದಾವಣಗೆರೆಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕ್ವಿಂಟಲ್ ಗೆ 7,800 ರೂ. ದಾಖಲೆ ಬೆಲೆಗೆ ಮಾರಾಟವಾಗಿದೆ. ಇದರಿಂದ ರೈತರಿಗೆ ಸಂತಸ ತಂದಿದೆ.

ಅ.08ರ ಚನ್ನಗಿರಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 65,599
  • ಕನಿಷ್ಠ ಬೆಲೆ 61,312
  • ಸರಾಸರಿ ಬೆಲೆ 64,416

ಅಡಿಕೆ ಇಳುವರಿ ಕುಸಿತ

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ‌ ಅ.8ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 65,599 ಇದ್ದು, ಕನಿಷ್ಠ ಬೆಲೆ 61,312 ರೂ., ಸರಾಸರಿ ಬೆಲೆ 64,416 ರೂ.‌ಇದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ. ಅತೀ ಹೆಚ್ಚು ಮಳೆಯಾಗಿದ್ದರಿಂದ ಅಡಿಕೆ ಇಳುವರಿ ಸ್ವಲ್ಪ ಕುಸಿತ ಕಂಡಿದ್ದು, ಕೊಯ್ಲು ಬರದಿಂದ ಸಾಗಿದೆ.

ಬೆಟ್ಟೆ ಅಡಿಕೆ ದರ

  1. ಗರಿಷ್ಠ ಬೆಲೆ 40,786
  2. ಕನಿಷ್ಠ ಬೆಲೆ 40,786
  3. ಸರಾಸರಿ ಬೆಲೆ 40,786

ಸತತ ದರ ಏರಿಕೆ

2025ರ ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಮೇ ತಿಂಗಳಲ್ಲಿ 59,512 ರೂ.ಗೆ ಇಳಿದಿದ್ದು, ಜೂನ್ ಆರಂಭದಲ್ಲಿ 59,000 ರೂ. ಇದ್ದು ಕೊನೆಯಲ್ಲಿ 56,599 ರೂ. ಗೆ ಇಳಿಕೆಯಾಗಿತ್ತು. ಜುಲೈ ಮೊದಲ ವಾರ ಚೇತರಿಕೆ ಕಂಡು ಈಗ 58,099 ರೂ. ಆಗಿತ್ತು. ಆಗಸ್ಟ್ ಆರಂಭದಲ್ಲಿ ಸತತ ಏರಿಕೆ ಕಂಡು ಕ್ವಿಂಟಲ್ ಗೆ 60,500ರೂ. ತಲುಪಿತ್ತು. ಈಗ ಸೆಪ್ಟೆಂಬರ್ ನಲ್ಲಿ 62,889 ರೂ. ಇತ್ತು. ಅಕ್ಟೋಬರ್ ಆರಂಭದಿಂದ ಸತತ ಏರಿಕೆ ಕಂಡು ಇಂದು (ಅ.08) 65,599 ರೂ. ಇದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *