Connect with us

Dvgsuddi Kannada | online news portal | Kannada news online

ದಾವಣಗೆರೆ: ವರ್ಷದ ಆರಂಭದಲ್ಲಿ ರಾಶಿ ಅಡಿಕೆ ಬೆಲೆ ಎಷ್ಟಿದೆ..? ಇಲ್ಲಿದೆ ಮಾಹಿತಿ…!!

ಪ್ರಮುಖ ಸುದ್ದಿ

ದಾವಣಗೆರೆ: ವರ್ಷದ ಆರಂಭದಲ್ಲಿ ರಾಶಿ ಅಡಿಕೆ ಬೆಲೆ ಎಷ್ಟಿದೆ..? ಇಲ್ಲಿದೆ ಮಾಹಿತಿ…!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆ ಕಳೆದ ವರ್ಷ ಸಾಕಷ್ಟು ಏರುಪೇರು ಕಂಡು, ವರ್ಷದ ಕೊನೆ ತಿಂಗಳಲ್ಲಿ ಮತ್ತೆ 49 ಸಾವಿರ ಗಡಿ ತಲುಪಿತ್ತು. ಇದೀಗ ಹೊಸ ವರ್ಷದ ಆರಂಭದಲ್ಲಿ ಅಡಿಕೆ ದರಲ್ಲಿ ಮತ್ತೆ ಏರಿಕೆ ಕಂಡಿದೆ. ಜ.1 ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,900 ರೂಪಾಯಿ ಇದ್ದು, ಕನಿಷ್ಠ ಬೆಲೆ 43,099 ರೂ.ಗಳಾಗಿದೆ.

2023 ವರ್ಷದ ಕೊನೆ ತಿಂಗಳಲ್ಲಿ ಬೆಲೆ ಏರಿಕೆ‌‌ ಕಂಡಿದ್ದು, 2024ರ ಹೊಸ ವರ್ಷದಲ್ಲೂ ಸಹ ಏರಿಕೆಯಾಗಿದ್ದು, ಇನ್ನಷು ಹೆಚ್ಚಳವಾಗುವ ಸಾಧ್ಯತೆ ಇದೆ. ಸ್ವಲ್ಪ‌ ದಿನ ಅಡಿಕೆ ಇಟ್ಟು ಮಾರಾಟ ಮಾಡುವ ರೈತರು ಹಾಗೂ ಖೇಣಿದಾರರಿಗೆ ಒಳ್ಳೆಯ ರೇಟ್ ಸಿಗಲಿದೆ.

2023 ರಲ್ಲಿ ಸಾಕಷ್ಟು ಏರಿಳಿತ ಕಂಡಿದ್ದರೂ, ವರ್ಷದ ಕೊನೆ ತಿಂಗಳಲ್ಲಿ ಮತ್ತೆ ಏರಿಕೆಯಾಗಿದ್ದು, ರೈತರಲ್ಲಿ ಸಂತಸ ಮೂಡಿದೆ. 2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 49 ಸಾವಿರ ಗಡಿ ತಲುಪಿತ್ತು.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.01ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 43,099 ರೂ, ಗರಿಷ್ಠ ಬೆಲೆ 48,900 ಹಾಗೂ ಸರಾಸರಿ ಬೆಲೆ 47,916 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 38,536ರೂ‌.ಗೆ ಮಾರಾಟವಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top