Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆಗೆ ಬಂಪರ್ ಬೆಲೆ; 50 ಸಾವಿರ ಗಡಿದಾಟಿದ ದರ- ಇಂದಿನ ಕನಿಷ್ಠ, ಗರಿಷ್ಠ ಬೆಲೆ ವಿವರ ಇಲ್ಲಿದೆ…

ದಾವಣಗೆರೆ

ದಾವಣಗೆರೆ: ಅಡಿಕೆಗೆ ಬಂಪರ್ ಬೆಲೆ; 50 ಸಾವಿರ ಗಡಿದಾಟಿದ ದರ- ಇಂದಿನ ಕನಿಷ್ಠ, ಗರಿಷ್ಠ ಬೆಲೆ ವಿವರ ಇಲ್ಲಿದೆ…

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ (arecanut rate) ಬಂಪರ್ ಬೆಲೆ ಬಂದಿದೆ. ಜನವರಿ ತಿಂಗಳಲ್ಲಿ ಸತತ‌ ಏರಿಕೆ ಬಳಿಕ ಇಂದು (ಜ.17) 50 ಸಾವಿರ ಗಡಿ ದಾಟಿ ಮುನ್ನುಗ್ಗುತ್ತಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿರುವ ಅಡಿಕೆ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈಗಾಗಲೇ ಈ ವೃರ್ಷದ ಕೊಯ್ಲು ಸಂಪೂರ್ಣವಾಗಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದಿನ ಒಳ್ಳೆಯ ರೇಟ್ ಸಿಗಲಿದೆ. ಇಂದು (ಜ.17) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 50, 299 ರೂಪಾಯಿ ಇದ್ದು, ಕನಿಷ್ಠ ಬೆಲೆ 47,012 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ ತಿಂಗಳಲ್ಲಿ 49 ಸಾವಿರ ಗಡಿ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.17ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 47,012 ರೂ, ಗರಿಷ್ಠ ಬೆಲೆ 50,299 ಹಾಗೂ ಸರಾಸರಿ ಬೆಲೆ 49,110 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 37,000 ರೂ‌.ಗೆ ಮಾರಾಟವಾಗಿದೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top