Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಕನಿಷ್ಠ, ಗರಿಷ್ಠ ದರ ವಿವರ ಇಲ್ಲಿದೆ…

IMG 20231230 090141

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಕನಿಷ್ಠ, ಗರಿಷ್ಠ ದರ ವಿವರ ಇಲ್ಲಿದೆ…

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ (arecanut rate) ಕಳೆದ 15 ದಿನದಿಂದ ಸತತ ಏರಿಕೆಯಲ್ಲಿದ್ದು, ಇಂದು 300 ರೂ.ಗಳಷ್ಟು ಇಳಿಕೆ ಕಂಡಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿರುವ ಅಡಿಕೆ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈಗಾಗಲೇ ಕೊಯ್ಲು ಸಂಪೂರ್ಣವಾಗಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದಿನ ಒಳ್ಳೆಯ ರೇಟ್ ಸಿಗಲಿದೆ. ಇಂದು (ಜ.19) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 50,000 ರೂಪಾಯಿ ಇದ್ದು, ಕನಿಷ್ಠ ಬೆಲೆ 47,599 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ ತಿಂಗಳಲ್ಲಿ 50 ಸಾವಿರ ಗಡಿ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.19 ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 47,599 ರೂ, ಗರಿಷ್ಠ ಬೆಲೆ 50,000 ಹಾಗೂ ಸರಾಸರಿ ಬೆಲೆ 49,027 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 35,379 ರೂ‌.ಗೆ ಮಾರಾಟವಾಗಿದೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top