Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರದಲ್ಲಿ ಸ್ಥಿರತೆ; ಇಂದಿನ ಕನಿಷ್ಠ, ಗರಿಷ್ಠ ದರ ವಿವರ ಇಲ್ಲಿದೆ‌..!

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ದರದಲ್ಲಿ ಸ್ಥಿರತೆ; ಇಂದಿನ ಕನಿಷ್ಠ, ಗರಿಷ್ಠ ದರ ವಿವರ ಇಲ್ಲಿದೆ‌..!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate)ದಲ್ಲಿ ಸ್ಥಿರತೆ ಕಂಡು ಬಂದಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದ್ರೆ ಯಾವುದೇ ದರ ಏರಿಕೆ-ಇಳಿಕೆ ಆಗಿಲ್ಲ.‌ ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಕಳೆದ ಮೂರ್ನಾಲ್ಕು ದಿನದಿಂದ ಇಳಿಮುಖವಾಗಿತ್ತು. ಇದೀಗ ಸ್ಥಿರತೆ ಕಾಯ್ದುಕೊಂಡಿದೆ. ಈಗಾಗಲೇ ಕೊಯ್ಲು ಸಂಪೂರ್ಣವಾಗಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಇನ್ನಷ್ಟು ರೇಟ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು (ಜ.30) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 49,200 ರೂಪಾಯಿ ಇದ್ದು, ಕನಿಷ್ಠ ಬೆಲೆ 47,312 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು 50,500 ರೂಪಾಯಿ ಗಡಿ ತಲುಪಿತ್ತು.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜ.30ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 47,312 ರೂ, ಗರಿಷ್ಠ ಬೆಲೆ 49,200 ಹಾಗೂ ಸರಾಸರಿ ಬೆಲೆ 48,483ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 37,000 ರೂ‌.ಗೆ ಮಾರಾಟವಾಗಿದೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top