Advertisement

ದಾವಣಗೆರೆ: ರಾಶಿ ಅಡಿಕೆ ಇಂದಿನ ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟಿದೆ…?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಕಳೆದ 20 ದಿನದಿಂದ ಕುಸಿತ ಕಾಣುತ್ತಿತ್ತು. ಇದರಿಂದ ರೈತರರಲ್ಲಿ ಆತಂಕ ಉಂಟು ಮಾಡಿತ್ತು. ಆದರೆ, ಇಂದು (ಫೆ.12) ಯಾವುದೇ ಕುಸಿತ ಕಂಡಿಲ್ಲ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಕೆ ಸ್ಥಿರವಾಗಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರ ನಂತರ ಕುಸಿತ ಆರಂಭವಾಗಿದ್ದು, 20 ದಿನದಲ್ಲಿ 2,200 ರೂ.ಗಳಷ್ಟು ಕುಸಿತ ಕಂಡಿತ್ತು.

ಈಗಾಗಲೇ ಕೊಯ್ಲು ಪೂರ್ಣಗೊಂಡಿದ್ದು, ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ರೇಟ್ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಫೆ.12 ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,400 ರೂ.ಗಳಿದ್ದು, ಕನಿಷ್ಠ ಬೆಲೆ 45,512 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48 ಸಾವಿರ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಫೆ.12ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 45,512 ರೂ, ಗರಿಷ್ಠ ಬೆಲೆ 48,400 ಹಾಗೂ ಸರಾಸರಿ ಬೆಲೆ 47,470 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 34,399 ರೂ‌.ಗೆ ಮಾರಾಟವಾಗಿದೆ.

 

 

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Recent Posts