Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ವರ್ಷ ಅಡಿಕೆ ಉಳಿಸಿಕೊಳ್ಳೋದೆ ಕಷ್ಟ.., ದರದಲ್ಲಿ ಮಾತ್ರ ಏರಿಕೆ ಇಲ್ಲ..!!! ಇಂದಿನ ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟಿದೆ…?

IMG 20231230 090141 1

ದಾವಣಗೆರೆ

ದಾವಣಗೆರೆ: ಈ ವರ್ಷ ಅಡಿಕೆ ಉಳಿಸಿಕೊಳ್ಳೋದೆ ಕಷ್ಟ.., ದರದಲ್ಲಿ ಮಾತ್ರ ಏರಿಕೆ ಇಲ್ಲ..!!! ಇಂದಿನ ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟಿದೆ…?

ದಾವಣಗೆರೆ: ಈ ಬೇಸಿಗೆಯಲ್ಲಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಉಳಿಸಿಕೊಳ್ಳೋದೆ ಕಷ್ಟ. ಇಂತಹ ಸಂದರ್ಭದಲ್ಲಿ ಕನಿಷ್ಠ‌ ಪಕ್ಷ ಅಡಿಕೆ‌ ದರದಲ್ಲಿ ಏನಾದ್ರೂ ಚೇತರಿಕೆ ಕಾಣುತ್ತದೆ ‌ಅಂದ್ರೆ, ಅದು ಕೂಡ ಅಷ್ಟಕಷ್ಟೇ… ಕಳೆದ ಒಂದು ತಿಂಗಳಿಂದ ನೂರು, ಇನ್ನೂರು ರೂಪಾಯಿ ಏರಿಳಿತದಲ್ಲಿಯೇ ಅಡಿಕೆ ದರವಿದೆ (arecanut rate). ಇನ್ನೂ ಅಂತರ್ಜಲ‌‌‌ ಕುಸಿದಿದ್ದು, ಬೋರ್ ವೆಲ್ ಗಳಿಂದ ನೀರು ಬರುತ್ತಿಲ್ಲ. ಹೀಗಾಗಿ ಹೇಗಾದ್ರೂ ಮಾಡಿ ಅತೀ ಬಿಸಿಲಿರುವ ಏಪ್ರಿಲ್, ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎನ್ನುತ್ತಿದ್ದಾರೆ.

ಹಿಂದಿನ ಎರಡ್ಮೂರು ದಿನದ ಮಾರುಕಟ್ಟೆಗೆ ಹೋಲಿಕೆ ಮಾಡಿದ್ರೆ 50 ರೂ.ಗಳಷ್ಟು ದರ ಚೇತರಿಕೆ ಕಂಡಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರ ನಂತರ ಕುಸಿತ ಕಂಡಿತ್ತು. ಒಂದು ತಿಂಗಳಲ್ಲಿ 2,300 ರೂ.ಗಳಷ್ಟು ಕುಸಿತ ಕಂಡು, ಈಗ ಸ್ವಲ್ಪ ಏರಿಕೆ ಕಾಣುತ್ತಿದೆ.

ಅಡಿಕೆ ತೋಟದಲ್ಲಿ ಹೊಂಬಾಳೆ ಕಟ್ಟುವ ಕಾರ್ಯ ಶುರುವಾಗಿದೆ. ಆದರೆ, ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು, ಬೋರ್ ವೆಲ್ ಗಳು ಬತ್ತಿ‌ ಹೋಗುತ್ತಿವೆ. ಈ ಬೇಸಿಗೆಯಲ್ಲಿ ತೋಟ ಉಳಿಸಿಕೊಳ್ಳುವುದೇ ರೈತರಿಗೆ ಸವಾಲಾಗಿದೆ.

ಸದ್ಯ ಅಡಿಕೆ ಮಾರುಕಟ್ಟೆ ಕುಸಿತದಿಂದ ಚೇತರಿಕೆ ಕಾಣುತ್ತಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಇಂದು ( ಮಾ.‌1) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,419 ರೂ.ಗಳಿದ್ದು, ಕನಿಷ್ಠ ಬೆಲೆ 46,112 ರೂ.ಗಳಾಗಿದೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48ಸಾವಿರದಿಂದ 49 ಸಾವಿರ ಒಳಗೆ ಇದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮಾ.1 ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,112 ರೂ, ಗರಿಷ್ಠ ಬೆಲೆ 48,419 ಹಾಗೂ ಸರಾಸರಿ ಬೆಲೆ 47,676 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 36,299 ರೂ‌.ಗೆ ಮಾರಾಟವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top