Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರದಲ್ಲಿ ಸತತ ಒಂದು ವಾರದಿಂದ ಭರ್ಜರಿ ಏರಿಕೆ; 49 ಸಾವಿರ ಗಡಿ ತಲುಪಿದ ಅಡಿಕೆ ದರ; ಇಂದಿನ ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟು..?

ದಾವಣಗೆರೆ

ದಾವಣಗೆರೆ: ಅಡಿಕೆ ದರದಲ್ಲಿ ಸತತ ಒಂದು ವಾರದಿಂದ ಭರ್ಜರಿ ಏರಿಕೆ; 49 ಸಾವಿರ ಗಡಿ ತಲುಪಿದ ಅಡಿಕೆ ದರ; ಇಂದಿನ ಕನಿಷ್ಠ, ಗರಿಷ್ಠ‌ ಬೆಲೆ ಎಷ್ಟು..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಸತತ ಒಂದು ವಾರದಿಂದ ಏರಿಕೆ ಕಂಡಿದೆ. ಕಳೆದ ಒಂದು ವಾರದ ಮಾರುಕಟ್ಟೆಗೆ ಹೋಲಿಸಿದ್ರೆ ಇಂದು (ಮಾ. 11) 800 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಸದ್ಯ ಅಡಿಕೆ ಮಾರುಕಟ್ಟೆ ಕುಸಿತದಿಂದ ಚೇತರಿಕೆ ಕಾಣುತ್ತಿದೆ. ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಇಂದು ( ಮಾ.‌11) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 48,900 ರೂ.ಗಳಿದ್ದು, ಕನಿಷ್ಠ ಬೆಲೆ 46,599 ರೂ.ಗಳಾಗಿದೆ.

ಇನ್ನೂ ಜಿಲ್ಲೆಯಲ್ಲಿ ಅಂತರ್ಜಲ‌‌‌ ಮಟ್ಟ ತೀವ್ರ ಕುಸಿದಿದ್ದು, ಬೋರ್ ವೆಲ್ ಗಳಿಂದ ನೀರು ಬರುತ್ತಿಲ್ಲ. ಮಳೆಗಾಲದಲ್ಲಿ ಐದಾರು ವಾಲ್ ಗಳಿಗೆ ಆಗುವಷ್ಟು ಬರುತ್ತಿದ್ದ ಬೋರ್ ವೆಲ್ ಗಳು ಈಗ ಒಂದೆರಡು ವಾಲ್ ಗಳಿಗೆ ಬಂದಿವೆ. ಇನ್ನೂ ಕೆಲವು ಬೋರ್ ಗಳು ನಿಂತೇ ಹೋಗಿವೆ. ಹೀಗಾಗಿ ಹೇಗಾದ್ರೂ ಮಾಡಿ ಏಪ್ರಿಲ್, ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎನ್ನುತ್ತಿದ್ದಾರೆ ದಾವಣಗೆರೆ ಜಿಲ್ಲೆಯ ರೈತರು.

ಸತತ ಒಂದು ವಾರದಿಂದ ದಿಢೀರ್ 800 ರೂಪಾಯಿ ಚೇತರಿಕೆ ಕಂಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಹೊಸ ವರ್ಷ 2024ರ ಆರಂಭದಿಂದಲೂ ಏರಿಮುಖದಲ್ಲಿದ್ದ ಅಡಿಕೆ ದರ ಜ. 15ರ ನಂತರ ಕುಸಿತ ಕಂಡಿತ್ತು. ಒಂದು ತಿಂಗಳಲ್ಲಿ 2,300 ರೂ.ಗಳಷ್ಟು ಕುಸಿತ ಕಂಡಿತ್ತು. ಈಗ ಸ್ವಲ್ಪ ಪ್ರಮಾಣದಲ್ಲಿ ದರ ಚೇತರಿಕೆ ಹಾದಿಗೆ ಮರಳಿದೆ.

ಅಡಿಕೆ ತೋಟದಲ್ಲಿ ಅಡಿಕೆ ಹರಳು ಕಟ್ಟುವ ಕಾರ್ಯ ಶುರುವಾಗಿದೆ. ಆದರೆ, ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು, ಬೋರ್ ವೆಲ್ ಗಳು ಬತ್ತಿ‌ ಹೋಗಿವೆ. ಈ ಬೇಸಿಗೆಯಲ್ಲಿ ತೋಟ ಉಳಿಸಿಕೊಳ್ಳುವುದೇ ರೈತರಿಗೆ ಸವಾಲಾಗಿದ್ದು, ಬೋರ್ ಗಳಿಂದ ನೀರು ಬರುವ ಒಂದೆರಡು ತಾಸಿನಲ್ಲಿಯೇ ಸ್ವಲ್ಪ‌, ಸ್ವಲ್ಪ ಮರಕ್ಕೆ ಬಿಟ್ಟು ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೆಲವು ಕಡೆ ಬೋರ್ ನಿಂತಿದ್ದರಿಂದ ಟ್ಯಾಂಕರ್ ಮೊರೆ ಹೋಗಿದ್ದಾರೆ.

2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ವರ್ಷದಲ್ಲಿಯೇ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ರೂ.ಗೆ ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ನಲ್ಲಿ 48 ಸಾವಿರ ಗಡಿ ದಾಟಿತ್ತು.ಇದೀಗ 2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಿಂದ ಸತತ ಕುಸಿತ ಕಂಡು ಈಗ 48ಸಾವಿರದಿಂದ 49 ಸಾವಿರ ಒಳಗೆ ಇದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮಾ.11ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,599 ರೂ, ಗರಿಷ್ಠ ಬೆಲೆ 48,900 ಹಾಗೂ ಸರಾಸರಿ ಬೆಲೆ 47,887 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 34,009 ರೂ‌.ಗೆ ಮಾರಾಟವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top