ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಭಾಸ್ಕರ್ ರಾವ್ ಕ್ಯಾಂಪಿನಲ್ಲಿ ಫಲಕ್ಕೆ ಬಂದಿದ್ದ 25 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.
ಭಾಸ್ಕರ್ ರಾವ್ ಕ್ಯಾಂಪ್ ನ ರೈತ ರಾಮಬಾಬು ತೋಟದಲ್ಲಿ ಈ ಕೃತ್ಯ ನಡೆದಿದೆ. ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದ್ದು, ರಾಮಬಾಬು ಮರು ದಿನ ಬೆಳಗ್ಗೆ ತೋಟಕ್ಕೆ ಹೋದಾಗ ಶಾಕ್ ಆಗಿದ್ದಾರೆ. ಮಕ್ಕಳಂತೆ ಸಾಕಿದ್ದ ಅಡಿಕೆ ಮರಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದನ್ನು ಕಂಡು ರೈತ ಕಣ್ಣೀರು ಹಾಕಿದ್ದಾನೆ.
ವಿಷಯ ತಿಳಿದ ತಕ್ಷಣ ಗ್ರಾಮಸ್ಥರು, ರೈತರು ಸ್ಥಳಕ್ಕೆ ಆಗಮಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.