ದಾವಣಗೆರೆ; ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಪಿ.ಹರೀಶ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ನಂದಿಗಾವಿ ಶ್ರೀನಿವಾಸ್ ಗೆ ಸೋಲಾಗಿದೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಗೆ ಸೋಲಾಗಿದೆ. ಕಾಂಗ್ರೆಸ್ ನ ಶಾಂತನಗೌಡ ಗೆ ಭರ್ಜರಿ ಜಯ ಗಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. 18 ಸಾವಿರ ಮತದಿಂದ ಬಿಜೆಪಿಯ ಲೋಕಿಕೆರೆ ನಾಗರಾಜ್ ಅವರನ್ನು ಸೋಲಿಸಿದ್ದಾರೆ. ಇನ್ನೂ ದಾವಣಗೆರೆ ಉತ್ತರದಿಂದ ಶಾಮನೂರು ಶಿವಶಂಕರಪ್ಪ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿಯ ಅಜಯ್ ಕುಮಾರ್ ಗೆ ಸೋಲಾಗಿದೆ.



