ದಾವಣಗೆರೆ; ರಾಜ್ಯ ವಿಧಾನಸಭೆ ಫಲಿತಾಂಶ ಹೊರ ಬಿದ್ದಿದ್ದು, ದಾವಣಗೆರೆ ದಕ್ಷಿಣ ಮತ್ತು ಉತ್ತರದಲ್ಲಿ ಅಪ್ಪ- ಮಗ ಇಬ್ಬರು ಜಯ ಗಳಿಸಿದ್ದಾರೆ. ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ತಂದೆ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 53,428 ಮತಗಳನ್ನು ಪಡೆಯುವ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಸೋಲುಂಡಿದ್ದು, ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಜಿ. ಅಜಯ್‌ಕುಮಾರ್ 56,052 ಮತ ಪಡೆದು ಸೋಲುಂಡಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ 92 ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪರು ಗೆದ್ದು ಇತಿಹಾಸ ನಿರ್ಮಿಸಿದರು. ಅವರು ಸುಮಾರು 28 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದಾರೆ. ಎಸ್. ಎಸ್. ಮಲ್ಲಿಕಾರ್ಜುನ್ ಅವರು 25 ಸಾವಿರಕ್ಕೂ ಹೆಚ್ಚು ಮತದಿಂದ ಗೆಲುವು ಸಾಧಿಸಿದ್ದಾರೆ.



