ದಾವಣಗೆರೆ: ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ಚಟುವಟಿಕೆಗಳನ್ನು ನಿರ್ವಹಿಸಲು, 2021-22ನೇ ಸಾಲಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಜ ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಮಾಹಿತಿ ಒದಗಿಸುವುದು ಅವಶ್ಯ. (ಬಾಲಭವನದಲ್ಲಿ ಕನಿಷ್ಠ 5 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಬಹುದಾಗಿದೆ.) ವೇತನ ರೂ.15000.
ಕಚೇರಿ ಸಹಾಯಕರ ಹುದ್ದೆಗೆ ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ್ದು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ವೇತನ ರೂ.10000 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್-1ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



