ದಾವಣಗೆರೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಬಾಲ ಭವನದ ವತಿಯಿಂದ ಬೇಸಿಗೆ ಶಿಬಿರ ಮೇ 15 ರಿಂದ 29 ರ ವರೆಗೆ ಜೆ.ಎಚ್. ಪಟೇಲ್ ಬಡಾವಣೆಯ ಬಾಲಭವನದಲ್ಲಿ ನಡೆಯಲಿದೆ.
ಮೇ 5 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮೇ 12ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. 6 ರಿಂದ 16 ವರ್ಷದ ಮಕ್ಕಳು ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುವೆಂಪುನಗರ, 14 ನೇ ಮುಖ್ಯ ರಸ್ತೆ, ಎಂ.ಸಿ.ಸಿ. `ಬಿ’ ಬ್ಲಾಕ್ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.



