ದಾವಣಗೆರೆ: ಜಿಲ್ಲಾಡಳಿತದಿಂದ ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರು ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಹರಿಕಾರರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಬಸವೇಶ್ವರರು 12 ನೇ ಶತಮಾನದಲ್ಲಿ ತಮ್ಮ ಸರಳವಾದ ವಚನಗಳ ಮೂಲಕ ಸಮಾಜದಲ್ಲಿನ ಮೌಢ್ಯತೆಯನ್ನು ನಿವಾರಿಸುವ ಕೆಲಸ ಮಾಡುವ ಮೂಲಕ ಕನ್ನಡ ಸಾಹಿತ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅನುಭವ ಮಂಟಪ ಸ್ಥಾಪಿಸುವ ಮೂಲಕ ಈಗಿನ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಆಗಿನ ಕಾಲದಲ್ಲಿಯೇ ಅವರ ಕಲ್ಪನೆಯಾಗಿತ್ತು. ಈ ಎಲ್ಲಾ ದೃಷ್ಟಿಯಿಂದ ಬಸವಣ್ಣನವರನ್ನು ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕ ಎಂದು ಕರೆಯಲ್ಪಡಲಾಗುತ್ತದೆ ಎಂದರು.

ಹೇಮರೆಡ್ಡಿ ಮಲ್ಲಮ್ಮ ಶಿವನ ಭಕ್ತೆಯಾಗಿ ಬಸವಣ್ಣನವರ ಮಾರ್ಗ ಅನುಸರಿಸಿದರು. ಅವರ ಜೀವನ ಎಲ್ಲರಿಗೂ ಸ್ಫೂರ್ತಿ ಹಾಗೂ ಮಲ್ಲಮ್ಮ ಮಹಾಸಾಧ್ವಿಯಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ.ಪರಮೇಶ್ವರಪ್ಪ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಡಾ.ಕೊಟ್ರೇಶ್ ಬಿದ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *