Connect with us

Dvgsuddi Kannada | online news portal | Kannada news online

ದಾವಣಗೆರೆ: ರಸ್ತೆಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಎರಡು ಕರಡಿ ದಾಳಿ; ಯುವಕನಿಗೆ ಗಂಭೀರ ಗಾಯ

davangere 16

ದಾವಣಗೆರೆ

ದಾವಣಗೆರೆ: ರಸ್ತೆಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಎರಡು ಕರಡಿ ದಾಳಿ; ಯುವಕನಿಗೆ ಗಂಭೀರ ಗಾಯ

ದಾವಣಗೆರೆ: ಜಮೀನಿಗೆ ನೀರು ಹಾಯಿಸಿ ವಾಪಾಸು ಬರುವಾಗ ಹಳ್ಳದಲ್ಲಿದ್ದ ಎರಡು ಕರಡಿಗಳು ಯುವಕನ ಮೇಲೆ ದಾಳಿ ನಡೆಸಿದ್ದು, ಯುವಕ ಗಂಭೀರವಾಗಿ ಗಾಯಗೊಳಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕನನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನಂದ (28) ತೀವ್ರ ಗಾಯಗೊಂಡ ಯುವಕನಾಗಿದ್ದಾನೆ. ರಂಗಾಪುರ ಗ್ರಾಮದ ನಿವಾಸಿ ಆನಂದ ಅವರು ಕೆ.ಕಲ್ಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದರು. ಜಮೀನಿಗೆ ನೀರು ಹಾಯಿಸಲು ಶನಿವಾರ ಬೆಳಗ್ಗೆ ಹೋಗಿ ವಾಪಾಸು ಬರುವಾಗ ದಾರಿ ಮಧ್ಯೆ ಹಳ್ಳದಲ್ಲಿದ್ದ ಕುಳಿತಿದ್ದ ಎರಡು ಕರಡಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಆನಂದ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top