ದಾವಣಗೆರೆ: ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಒಟ್ಟು ಬಾಕಿ ರೂ 25.89 ಕೋಟಿ ವಿದ್ಯುತ್ ಬಾಕಿ ಮೊತ್ತವನ್ನು ಏಳು ದಿನಗಳ ಒಳಗಾಗಿ ಪಾವತಿಸುವಂತೆ ಬೆಸ್ಕಾಂ ಸೂಚಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಮೇ-2022ರ ಅಂತ್ಯಕ್ಕೆ ಬೆಸ್ಕಾಂ ವಿದ್ಯುತ್ ಶುಲ್ಕ ಬಾಕಿ ಮೊತ್ತ ಪಾವತಿಸದೇ ಇದ್ದಲ್ಲಿ ಗ್ರಾಪಂ ಪಿಡಿಓ, ಗ್ರಾಪಂ ವ್ಯಾಪ್ತಿಗೆ ಬರುವ ವಿದ್ಯುತ್ ಸ್ಥಾವರಗಳ ಕ್ರೋಡಿಕರಿಸಿದ ವಿದ್ಯುತ್ ಬಾಕಿ ಮೊತ್ತವನ್ನು ಗ್ರಾಪಂ ಪಿಡಿಓ ಕಛೇರಿಯ ಆರ್.ಆರ್ ಸಂಖ್ಯೆಗೆ ವರ್ಗಾವಣೆ ಮಾಡಿ ವಿದ್ಯುತ್ ಕಡಿತಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗೆ ಬೆಸ್ಕಾಂ ಜಗಳೂರು ಉಪವಿಭಾಗ ಜವಾಬ್ದಾರಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ವಾ ಕಾ & ಪಾ ಉಪವಿಭಾಗ, ಬೆಸ್ಕಾಂ, ಜಗಳೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



