ದಾವಣಗೆರೆ: ಜಿಲ್ಲೆಯ ಹರಿಹರ, ಹೊನ್ನಾಳಿ, ನ್ಯಾಮತಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ 63 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬೆಸ್ಕಾಂ ವಿಭಾಗೀಯ ಕಾರ್ಯನಿರ್ವಹಕ ಇಂಜಿನಿಯರ್ ಪಿ.ವಿನಯ್ ಕುಮಾರ್, ಕುಡಿಯುವ ನೀರು, ಬೀದಿ ದೀಪ ಹಾಗೂ ವಿದ್ಯುತ್ ಸ್ಥಾವರಗಳ ಬಾಕಿ ಬಿಲ್ ಉಳಿಸಿಕೊಳ್ಳಲಾಗಿದೆ. ಈ ಬಗ್ಗೆ ನೋಟಿಸ್ ನೀಡಿದ್ದು, ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದರು.



