ಭದ್ರಾವತಿ: ಭದ್ರಾ ಜಲಾಶಯಕ್ಕೆ ನಾಳೆ (ಜು.30) ಬೆಳಿಗ್ಗೆ 9.00 ಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಜಲಾಶಯಕ್ಕೆ ಭೇಟಿ ನೀಡಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ಪಡೆದರು.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು ಹಾಗೂ ರೈತ ಮುಖಂಡರು ಭಾಗವಹಿಸುವ ಸಾಧ್ಯತೆ ಇದ್ದು, ಯಾವುದೇ ರೀತಿ ಸಮಸ್ಯೆಯಾಗದಂತೆ ಕೂರಲು ಆಸನದ ವ್ಯವಸ್ಥೆ ಹಾಗೂ ಉಪಹಾರ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಶ್ರೀ ಪಿ.ವಿನಾಯಕ ರವರು,
ನೀರಾವರಿ ಇಲಾಖೆ ಅಧೀಕ್ಷಕ ಅಭಿಯಂತರರು, ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.