ದಾವಣಗೆರೆ: ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ನಾಳೆ (ಡಿ.28) ಬೆಳಿಗ್ಗೆ 11 ಗಂಟೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಲಿದೆ. ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ ಹಾಗೂ ಹರಿಹರ ಶಾಖಾ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀರು ಹರಿಸುವ ಸಂಬಂಧ 79 ನೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗುವುದೆಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರರಾಮಯ್ಯ ತಿಳಿಸಿದ್ದಾರೆ.



