ದಾವಣಗೆರೆ: ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್ ಗಳನ್ನು ತೆರವುಗೊಳಿಸಿ, ಪಂಪ್‍ಸೆಟ್‍ಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.
ಇಂದು (ನ.1) ದಾವಣಗೆರೆ ಹೊನ್ನಾಳಿ ರಸ್ತೆಯಲ್ಲಿರುವ ಅರಳೀಪುರ, ಯಲೋದಹಳ್ಳಿ ಹಾಗೂ ಇನ್ನಿತೆರೆ ಪ್ರದೇಶಗಳ ಕಾಲುವೆ, ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿದ ಪಂಪ್‍ಗಳನ್ನು ತೆರವುಗೊಳಿಸಲಾಗಿದೆ. ನೀರಾವರಿ ಇಲಾಖೆ, ಪೊಲೀಸ್ , ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮಾಡಿದ್ದಾರೆ.
ಈ ಬಾರಿ ತೀವ್ರ ಮಳೆಯ ಕೊರತೆ ಹಿನ್ನೆಲೆ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ನಾಲೆಗಳಿಂದ ಅಚ್ಚುಕಟ್ಟಿನ ಕೊನೆ ಭಾಗದ ರೈತರ ಬೆಳೆಗಳಿಗೆ ಭದ್ರಾ ನೀರು ತಲುಪುತ್ತಿಲ್ಲ. ಹೀಗಾಗಿ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿದ ಪಂಪ್‍ಸೆಟ್ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಭದ್ರಾ ನಾಲೆಗಳಲ್ಲಿ ನೀರು ಹರಿಸಲು ಆನ್ ಅಂಡ್ ಆಫ್ ವ್ಯವಸ್ಥೆ ಕೈಗೊಳ್ಳಲಾಗಿದ. ನೀರಾವರಿ ಇಲಾಖೆ ಮತ್ತು ಬೆಸ್ಕಾಂ ಅಧಿಕಾರಿಗಳು ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳನ್ನು ತೆರವುಗೊಳಿಸಬೇಕು.
ಭತ್ತವು ಕಾಳು ಕಟ್ಟುವ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಭತ್ತಕ್ಕೆ ನೀರಿನ ಹೆಚ್ಚಿನ ಅವಶ್ಯಕತೆ ಇದೆ. ಹೀಗಾಗಿ ನೀರಾವರಿ ನಿಗಮದ ಇಂಜಿನಿಯರ್ ಗಳು ಸಕಾಲದಲ್ಲಿ ರೈತರಿಗೆ ನೀರನ್ನು ಒದಗಿಸಬೇಕು. ದಾವಣಗೆರೆ ವಿಭಾಗದ ನಾಲೆಗಳಿಗೆ 7 ದಿನ ಹಾಗೂ ಮಲೆಬೆನ್ನೂರು ವಿಭಾಗದ ನಾಲೆಗಳಿಗೆ 6 ಮತ್ತು 3 ದಿನದಂತೆ ಆನ್ ಅಂಡ್ ಆಫ್ ಸಿಸ್ಟಮ್ ಅಳವಡಿಸಲಾಗಿದೆ.
ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ; ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಫ್ರೀ ಟ್ರಾನ್ಸ್ ಫಾರ್ಮರ್ ಸಿಗಲ್ಲ….!



