ಭದ್ರಾವತಿ: ಭದ್ರಾ ಜಲಾಶಯ ಪ್ರದೇಶದ ಸುತ್ತಮುತ್ತ ಮಳೆ ಅಬ್ಬರ ಮುಂದುವರೆದಿದೆ. ಇದರ ಪರಿಣಾಮ ಭದ್ರೆ ಉಕ್ಕಿ ಹರಿಯುತ್ತಿದೆ. ಡ್ಯಾಂಗೆ ಇಂದು (ಜು.26) ಬೆಳಗ್ಗೆ 6 ಗಂಟೆ ವೇಳೆಗೆ24,704 ಕ್ಯೂಸೆಕ್ ಒಳ ಹರಿವಿದೆ. ಇಂದಿನ ನೀರಿನ ಮಟ್ಟ 155.3 ಅಡಿಯಷ್ಟಿದ್ದು, ಕಳೆದ ವರ್ಷ ಇದೇ ದಿನ 185 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಡ್ಯಾಂ ನಿಂದ ನಾಲೆಗಳಿಗೆ ಒಳ ಹರಿವಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿತ್ತು.
ಈ ವರ್ಷ ಜೂನ್ ನಲ್ಲಿ ನಿರೀಕ್ಷತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ ನೀರು ಸಂಗ್ರಹ ಕುಸಿದಿದೆ. ಕಳೆದ ವರ್ಷದ ಈ ದಿನಕ್ಕೆ ಹೋಲಿಸಿದ್ದರೆ 30 ಅಡಿಯಷ್ಟು ನೀರು ಕೊರತೆಯಲ್ಲಿದೆ. ನಿರೀಕ್ಷಿತ ಮಟ್ಟದಲ್ಲಿ ಭದ್ರಾ ಡ್ಯಾಂ ತುಂಬಾದಿದ್ದರಿಂದ ಅಚ್ಚುಕಟ್ಟು ಪ್ರದೇಶದ ಭತ್ತ, ಅಡಿಕೆ, ತೆಂಗು, ಮೆಕ್ಕೆಜೋಳ ಬೆಳೆಗಾರರಲ್ಲಿ ಆತಂಕ ಉಂಟು ಮಾಡಿತ್ತು. ಇದೀಗ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರಿನ ಒಳ ಹರಿವಿದ್ದು, ಡ್ಯಾಂ ತುಂಬುವ ಭರವಸೆ ಉಂಟಾಗಿದೆ.
- ಡ್ಯಾಂ ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 155.3 ಅಡಿ
- ಪೂರ್ಣ ನೀರಿನ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 34,472 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳ ಹರಿವು: 224,704 ಕ್ಯೂಸೆಕ್
- ಒಟ್ಟು ಹೊರ ಹರಿವು: 179 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್
- ಎಡದಂಡೆ ನಾಲೆ: 0.00 ಕ್ಯೂಸೆಕ್
- ಕಳೆದ ವರ್ಷ ಈ ದಿನ : 185 ಅಡಿ



