ಭದ್ರಾವತಿ: ದಾವಣಗೆರೆ, ಶಿವಮೊಗ್ಗ ಜಿಲ್ಲೆ ರೈತರ ಜೀವನಾಡಿಯಾದ ಭದ್ರಾ ಡ್ಯಾಂ ಒಳ ಹರಿವು ಹೆಚ್ಚಾಗಿದೆ. ಮುಂಗಾರು ಪ್ರಾರಂಭವಾಗಿ ಒಂದು ತಿಂಗಳ ನಂತರ ಭದ್ರಾ ಜಲಾಶಯದ ಪ್ರದೇಶ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು, ಭಾರೀ ಪ್ರಮಾಣದಲ್ಲಿ ಡ್ಯಾಂಗೆ ನೀರು ಹರಿದು ಬರುತ್ತಿದೆ. ಇಂದು (ಜು.06) 6,479 ಕ್ಯೂಸೆಕ್ ಒಳ ಹರಿವು ಇದ್ದು, ನೀರಿನ ಮಟ್ಟ 138 ಅಡಿಯಷ್ಟಿದೆ. ಕಳೆದ ವರ್ಷ (2022) ಇದೇ ದಿನ 160 ಅಡಿಯಷ್ಟು ನೀರು ಸಂಗ್ರಹವಾಗಿತ್ತು.
- ಡ್ಯಾಂ ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 138 ಅಡಿ
- ಪೂರ್ಣ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 21,363 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳಹರಿವು: 6,479 ಕ್ಯೂಸೆಕ್
- ಒಟ್ಟು ಹೊರಹರಿವು: 160 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್
- ಎಡದಂಡೆ ನಾಲೆ: 0.00ಕ್ಯೂಸೆಕ್
- ಕಳೆದ ವರ್ಷ ಈ ದಿನ : 160ಅಡಿ



