ದಾವಣಗೆರೆ: ಇಂದಿನಿಂದಲೇ ಭದ್ರಾ ನಾಲೆಗೆ ನೀರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಕಾರ್ಯದರ್ಶಿ ಸುಜಾತ ತಿಳಿಸಿದ್ದಾರೆ. ಒಟ್ಟು 2 ಹಂತದಲ್ಲಿ 43 ದಿನ ಭದ್ರಾ ಜಲಾಶಯದಿಂದ ಬಲ ದಂಡೆ ನಾಲೆಗೆ ನೀರು ಹರಿಯಲಿದೆ. ಈ ಮೂಲಕ ಭಾರತೀಯ ರೈತ ಒಕ್ಕೂಟ ಮತ್ತು ವಿವಿಧ ಸಂಘಟನೆಗಳು ನಿನ್ನೆ ಕರೆ ನೀಡಿದ್ದ ದಾವಣಗೆರೆ ಬಂದ್ ಯಶಸ್ವಿಯಾಗಿದೆ.
2023-24 ನೇ ಸಾಲಿನಲ್ಲಿ ಭದ್ರಾ ಜಲಾಶಯ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು. ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳು ನೀರನ್ನು ಹರಿಸಲಾಗುವುದು. ಇನ್ನೂ ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನಗಳು ನೀರನ್ನು ಹರಿಸಲಾಗುತ್ತದೆ. ನಂತರ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ಹಾಗೂ ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳು ನೀರನ್ನು ಹರಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಲೆಯಲ್ಲಿ ಸತತ ನೂರು ದಿನಗಳ ಕಾಲ ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆ ಬಂದ್ ನಡೆಸಿತ್ತು. ನಿನ್ನೆ ದಾವಣಗೆರೆ ಬಂದ್ ಸಹ ಯಶಸ್ವಿಯಾಗಿತ್ತು. ಇದೀಗ ಡ್ಯಾಂ ನಿಂದ ನೀರು ಹರಿಸಲು ನಿರ್ಧರಿದ್ದು, ಇದು ಒಣಗುತ್ತಿದ್ದ ಭತ್ತ ಬೆಳೆಯ ರೈತರಿಗೆ ಸಂತಸ ತಂದಿದೆ ತಂದಿದೆ.



