ಶಿವಮೊಗ್ಗ: ಭದ್ರಾ ಜಲಾಶಯ ಒಳ ಹರಿವು ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಯಾವುದೇ ಸಂದರ್ಭ ಕ್ರಸ್ಟ್ ಗೇಟ್ ಮೂಲಕ ನೀರು ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನೀರಾವರಿ ನಿಗಮದ ವತಿಯಿಂದ ಸಾರ್ವಜನಿಕರಿಗೆ ಅಲರ್ಟ್ ನೀಡಿದೆ.
ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಒಳ ಹರಿವಿನ ಪ್ರಮಾಣ 35 ಸಾವಿರ ಕ್ಯೂಸೆಕ್‌ನಿಂದ 40 ಸಾವಿರ ಕ್ಯೂಸೆಕ್ ಇದೆ. ಇದೇ ರೀತಿ ಮುಂದುವರೆದರೆ ಶೀಘ್ರದಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲಿದೆ. ಯಾವುದೆ ಸಂದರ್ಭ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ತಿಳಿಸಲಾಗಿದೆ.
ಭದ್ರಾ ನದಿ ಎಡ ಮತ್ತು ಬಲ ದಂಡೆ ಹಾಗೂ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.



