Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದಲೇ ನಾಲೆಗೆ ನೀರು; ಐಸಿಸಿ ಸಭೆಯಲ್ಲಿ ನಿರ್ಣಯ

bhadra dam 19

ದಾವಣಗೆರೆ

ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದಲೇ ನಾಲೆಗೆ ನೀರು; ಐಸಿಸಿ ಸಭೆಯಲ್ಲಿ ನಿರ್ಣಯ

ಶಿವಮೊಗ್ಗ; ಭದ್ರಾ ಜಲಾಶಯದಿಂದ ಇಂದು (ಜು.29) ರಾತ್ರಿಯಿಂದ ಎಡದಂಡೆ ಮತ್ತು ಬಲದಂಡೆ ನಾಲೆಗೆ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎನ್ ಸುಜಾತಾ ತಿಳಿಸಿದ್ದಾರೆ.

ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ಎಡ ಹಾಗೂ ಬಲದಂಡೆ ಕಾಲುವ ನೀರು ಹರಿಸಲು ಇಂದು‌(ಜು.29) ನಡೆದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಇಲ್ಲಿನ‌ ಮಲವಗೊಪ್ಪದ ಭದ್ರಾ ಕಾಡಾ ಸಮಿತಿ ಕಚೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು‌. ಈ ಸಭೆಯಲ್ಲಿ ಇಂದು ಸಂಜೆ, ಇಲ್ಲವೇ ರಾತ್ರಿ ಕಾಲುವೆಗೆ ನೀರು ಹರಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಹರಿಹರ ಶಾಸಕ ಬಿ.ಪಿ.ಹರೀಶ, ಮಾಯಕೊಂಡ ಶಾಸಕ ಬಸವಂತಪ್ಪ, ವಿಜಯ ನಗರ ಜಿಲ್ಲೆ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಕಾಡಾ ಅಧ್ಯಕ್ಷ ಡಾ.ಅಂಶುಮಂತ್ , ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿ, ರೈತ ಮುಖಂಡರು ಪಾಲ್ಗೊಂಡಿದ್ದರು. ದಾವಣಗೆರೆ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಗೈರಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top