Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿಸುವ ದಿನಾಂಕ ವಿಸ್ತರಣೆ; ಎಡ, ಬಲದಂಡೆ ನಾಲೆಗೆ ಹೆಚ್ಚುವರಿ ಎಷ್ಟು ದಿನ…?

bhadra dam dvgsuddi

ದಾವಣಗೆರೆ

ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿಸುವ ದಿನಾಂಕ ವಿಸ್ತರಣೆ; ಎಡ, ಬಲದಂಡೆ ನಾಲೆಗೆ ಹೆಚ್ಚುವರಿ ಎಷ್ಟು ದಿನ…?

ದಾವಣಗೆರೆ: ಭದ್ರಾ ಜಲಾಶಯದ ಅಚ್ಚುಕಟ್ಟುದಾರ ವ್ಯಾಪ್ತಿಯ ಭತ್ತ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಮೇ.10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ.18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಪ್ರಸಕ್ತ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‍ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top