ದಾವಣಗೆರೆ: ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ. ಬಂದ್ ಗೆ ರೈತ ಪರ ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಕೃಷಿಗೆ ಸಬಂಧಿಸಿದಂತ ಮೂರು ಕಾಯ್ದೆ ವಾಪಸ್ ಪಡೆಯಬೇಕು. ಅಗತ್ಯ ವಸ್ತು ಬೆಲೆ ಮತ್ತು ಪೆಟ್ರೋಲ್, ಡೀಸಲ್ ಬೆಲೆ ನಿಯಂತ್ರಣಕ್ಕೆ ತರಬೇಕೆಂದು ದೇಶದಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ. ರಾಜ್ಯದಲ್ಲಿ ಎಲ್ಲ ಸಂಘನೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ ಎಂದರು.
ಮಾದೇಶದಾದ್ಯಂತ ಪ್ರಮುಖ 500 ಕ್ಕೂ ಹೆಚ್ಚು ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ರೈತರ ಉತ್ಪಾದನೆ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ ಒಪ್ಪಂದ) ಮತ್ತು ಅಗತ್ಯ ಸರಕುಗಳ ಕಾಯ್ದೆಯ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ರೈತಮುಖಂಡ ತೇಜಸ್ವಿ ಪಟೇಲ್ ಉಪಸ್ಥಿತರಿದ್ದರು.



