ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಾಳೆ (BIET ) ನಾಳೆಯಿಂದ (ಡಿ.10) ಎರಡು ದಿನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಲೇಜಿನ ಸಾರ್ವಜನಿಕ ಸಂಪರ್ಕ ಡೀನ್ ಡಾ
ಜಿ.ಪಿ.ದೇಸಾಯಿ, ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತು ನಾಳೆ ಬೆಳಿಗ್ಗೆ 10 ಗಂಟೆಗೆ ಬಿಐಇಟಿ ಆವರಣದಲ್ಲಿರುವ ಎಸ್.ಎಸ್ . ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಕಾರ್ಯಾಗಾರ ನಡೆಯಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ . ಕರಿಸಿದ್ದಪ್ಪ , ಕುಲಸಚಿವರಾದ ಡಾ. ಎ.ಎಸ್.ದೇಶಪಾಂಡೆ , ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ . ಸಿದ್ಧಪ್ಪ ಮತ್ತು ಬಿ.ಐ.ಇ.ಟಿ. ಕಾಲೇಜಿನ ನಿರ್ದೇಶಕರಾದ ಪ್ರೊ . ವೈ . ವೃಷಭೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಬಿ.ಐ.ಇ.ಟಿ. ಪ್ರಾಂಶುಪಾಲರಾದ ಎಚ್.ಬಿ.ಅರವಿಂದ ಸಮಾರಂಭದ ಅಧ್ಯಕ್ಷತೆ ವಹಿಸುವರು. ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಹಕ್ಕಾಗಿದ್ದು , ಅವರ ಜೀವನವನ್ನು ರೂಪಿಸುವುದರಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಶಿಕ್ಷಣ ವ್ಯವಸ್ಥೆ ಮತ್ತು ನೀತಿಗಳು ಕಾಲಕ್ಕೆ ಅನುಗುಣವಾಗಿದ್ದು ನವೀನ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತಂದು ಆಧುನೀಕರಣಗೊಳಿಸಲು ರಾಷ್ಟ್ರೀಯ ಶಿಕ್ಷಣ ನೀತಿ -2020 ನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳ ಸುಮಾರು 400 ಜನ ಉಪನ್ಯಾಸಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಕೋವಿಡ್ -19 ರ ನಿಯಮಾವಳಿಗಳಂತೆ , ಈ ಕಾರ್ಯಾಗಾರವನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ರೀತಿಯಲ್ಲಿ ಆಯೋಜಿಸಲಾಗಿದೆ . ಈ ಕಾರ್ಯಾಗಾರದ ಉದ್ದೇಶ ಹೊಸ ಶಿಕ್ಷಣ ನೀತಿ 2020 ನ್ನು ಅರ್ಥೈಸುವುದು ಮತ್ತು ವಿಶ್ಲೇಷಿಸುವುದು , ಕೌಶಲ್ಯ ತರಬೇತಿ , ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ನಡುವಿನ ಅಂತರ ಕಡಿಮೆ ಮಾಡುವುದು , ನೀತಿಯ ಅನುಷ್ಠಾನದಲ್ಲಿ ವಿದ್ಯಾರ್ಥಿಗಳ , ಶಿಕ್ಷಕರ ಮತ್ತು ಸಮಾಜದ ಪಾತ್ರದ ಬಗ್ಗೆ ಚರ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಹೆಚ್.ಬಿ ಅರವಿಂದ್, ಪ್ರೋ.ವೈ.ವೃಷಬೇಂದ್ರಪ್ಪ,ಸಿ.ಆರ್ ನಿರ್ಮಲ, ಕಲ್ಲೇಶಪ್ಪ ಉಪಸ್ಥಿತರಿದ್ದರು.



