ದಾವಣಗೆರೆ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿ- ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಹೆಬ್ಬಾಳ ಗ್ರಾಮದ ತೇಜಸ್, ಹೊನ್ನನಾಯಕನಹಳ್ಳಿಯ ಶಿವು ಮೃತಪಟ್ಟವರಾಗಿದ್ದಾರೆ. ಈ ಇಬ್ಬರನ್ನು ಸಮೀಪದ ಎಸ್ ಎಸ್ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



