ದಾವಣಗೆರೆ: ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ನ ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕಡದಕಟ್ಟೆ ಹೆಲಿಪ್ಯಾಡ್ ಬಳಿ ನಡೆದಿದೆ.
ನ್ಯಾಮತಿ ತಾಲ್ಲೂಕಿನ ಮಾದನಬಾವಿ ಗ್ರಾಮದ ಸಿದ್ದೇಶ್ (22) ಮೃತಪಟ್ಟ ಯುವಕನಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಬೈಕ್ ಸವಾರ ಪ್ರಸನ್ನ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



