ದಾವಣಗೆರೆ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಣಿಗೆರೆಯಲ್ಲಿ ಘಟನೆ ನಡೆದಿದ್ದು, ಸಂತೇಬೆನ್ನೂರಿ ರವಿಕುಮಾರ್ (55) ಮೃತ ವ್ಯಕ್ತಿಯಾಗಿದ್ದಾರೆ. ತಣಿಗೆರೆ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದು ರವಿಕುಮಾರ್ ಸಾವನ್ನಪ್ಪಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.