ದಾವಣಗೆರೆ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ ಘಟನೆ ನಡೆದಿದೆ. ಜಾಲಿ ರೆಡ್‌ಗೆಂದು ಬೈಕ್ ನಲ್ಲಿ ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು.ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ.
ಮತ್ತೊಂದೆಡೆ ತಡೆ ಗೋಡೆಗೆ ಡಿಕ್ಕಿಯಾಗಿ ರಸ್ತೆಯ ಮಧ್ಯೆ ಬಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.