ದಾವಣಗೆರೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2020-21ನೇ ಸಾಲಿನಲ್ಲಿ ಬೈಕ್ ಖರೀದಿಗೆ 25 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಇ-ವಾಣಿಜ್ಯ ಸಂಸ್ಥೆಗಳಾದ ಝೊಮ್ಯಾಟೋ, ಸ್ವಿಗ್ಗಿ, ಊಬರ್, ಅಮೇಜಾನ್ ಇತರೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋದಲ್ಲಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ.25 ಸಾವಿರಗಳ ಸಹಾಯಧನ ನೀಡಲಾಗುವುದು. ಜತೆಗೆ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಚೇರಿಯಲ್ಲಿ ಉಚಿತವಾಗಿ ಪಡೆದು ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ www.dbcdc.karnataka.gov.in ಪಡೆದು ಆಫ್‍ಲೈನ್/ಆನ್‍ಲೈನ್‍ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಡಿ.19 ರೊಳಗೆ ಸಲ್ಲಿಸುವುದು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230934 ನಿಗಮದ ವೆಬ್‍ಸೈಟ್ ಅಥವಾ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದೆಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



