ದಾವಣಗೆರೆ; ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದು ಲೋಕಸಭೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಶಾಸಕ, ಸಚಿವರನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್ .ಎಸ್ ಮಲ್ಲಿಕಾರ್ಜುನ್ ಭೇಟಿಯಾಗಿದ್ದ ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ, ಮತ್ತೆ ಇಂದು (ಸೆ.17) ಎಸ್.ಎಸ್. ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ನಗರದ ಎಂಸಿಸಿಎ ಬ್ಲಾಕ್ನಲ್ಲಿರುವ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ, ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಹಾಗೂ ಶಾಸಕ ಶಾಮನೂರ ಶಿವಶಂಕರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಪದೇ ಪದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿರುವ ರೇಣುಕಾಚಾರ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ.
ಈ ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಭದ್ರಾ ಕಾಲುವೆ ನೀರಿನ ವಿಚಾರವಾಗಿ ಚರ್ಚಿಸಲು, ರೈತರಪರವಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ ಮಾಡಿದ್ದೇನೆ. ಇದು ರಾಜಕೀಯ ಮೀರಿದ ವಿಶ್ವಾಸ. ಕಾಂಗ್ರೆಸ್ ಪಕ್ಷ ಯಾವುದೇ ಆಹ್ವಾನ ನೀಡಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿ ಎಂದಿದ್ದೇನೆ ಅಷ್ಟೇ.
ದಾವಣಗೆರೆಯಲ್ಲಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷಕ್ಕೆ ದುಡಿದವರನ್ನು ಬಿಟ್ಟು ತಮಗೆ ಬೇಕಾದವರನ್ನು ಜಿಲ್ಲಾಧ್ಯಕ್ಷ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ. ನಿಷ್ಠಾವಂತರಾಗಿ ದುಡಿದವರನ್ನು ಮೂಲೆಗುಂಪು ಮಾಡಿದ್ದಾರೆ. ನನಗೆ ಎಚ್ಚರಿಕೆ ಕೊಡಲು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಏನು ಅಧಿಕಾರವಿದೆ. ಬಿಜೆಪಿಗೆ ಅವರ ಕೊಡುಗೆ ಏನು. ಚುನಾವಣೆ ಸಮಯದಲ್ಲಿ ಕ್ಷೇತ್ರಗಳಿಗೆ ಬಂದಿದ್ದರಾ. ಸಿಎಂ ಜಗದೀಶ್ ಶೆಟ್ಟರ್ ಕರೆ ಮಾಡಿದ್ದು ನಿಜ. ಅತ್ಮೀಯರು ಸೌಹಾರ್ದಯುತವಾಗಿ ಕರೆ ಮಾಡಿ ಮಾತನಾಡಿದ್ದಾರೆ ಎಂದರು.
ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ