ದಾವಣಗೆರೆ: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಾಳೆ (ಏ.19) ಬೃಹತ್ ರೋಡ್ ಶೋ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಳಿಗ್ಗೆ 9.30ಗಂಟೆಗೆ ದಾವಣಗೆರೆಯ ಮೂರು ಸ್ಥಳದಿಂದ ಮೆರವಣಿಗೆ ಆರಂಭವಾಗಲಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಶಕ್ತಿ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಿಂದ ಮೊದಲ ಮೆರವಣಿಗೆ, ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನದ ಮಾರ್ಗದಿಂದ 2ನೇ ಮೆರವಣಿಗೆ ಹಾಗೂ ರಾಮ್ ಅಂಡ್ ಕೋ ವೃತ್ತದ ಮಾರ್ಗವಾಗಿ 3ನೇ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ಧನರೆಡ್ಡಿ, ಭೈರತಿ ಬಸವರಾಜ್, ಬಿ.ಶ್ರೀರಾಮುಲು, ಜೆ.ಸಿ. ಮಾಧುಸ್ವಾಮಿ, ಬಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ನಟಿ ಶೃತಿ, ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಹಾಲಿ, ಮಾಜಿ ಶಾಸಕರು, ಮುಖಂಡರು ಪಾಲ್ಗೊಳ್ಲಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್, ಮುಖಂಡರಾದ ಕೊಳೇನಹಳ್ಳಿ ಬಿ.ಎಂ.ಸತೀಶ್, ಹೆಚ್. ಎನ್ .ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್, ಗೋವಿಂದ ರಾಜ್, ಶ್ರೀನಿವಾಸ್ ದಾಸಕರಿಯಪ್ಪ, ದಂಡಪಾಣಿ, ಟಿಂಕರ್ ಮಂಜಣ್ಣ ಇದ್ದರು.



