ದಾವಣಗೆರೆ: ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಕೇಸ್ ರದ್ದುಪಡಿಸಿವಂತೆ ಬಿಜೆಪಿ ವತಿಯಿಂದ ಇಂದು (ಜ.19) ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.
ದಾವಣಗೆರೆ: ಅಡಿಕೆ ದರ 10 ದಿನ ನಂತರ ಚೇತರಿಕೆ; ಇಷ್ಟಿದೆ ಇಂದಿನ ದರ
ಅಕ್ರಮ ಮಣ್ಣು ಸಾಗಾಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗಿದಬದಾಖಲೆ ನೀಡಿದರೂ, ಪ್ರಕರಣ ದಾಖಲಿಸಿಲ್ಲ ಎಂದು ಜಿಲ್ಲಾಡಳಿತ, ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ನಾಯಕರು ಭಿನ್ನಮತ ಮರೆತು ಒಂದಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಎನ್ ಡಿ ಎ ಮೈತ್ರಿ ಪಕ್ಷ ಜೆಡಿಎಸ್ ಸಹ ಸಾಥ್ ನೀಡಿತು.
ನಗರದ ಜೆಇಬಿ ವೃತ್ತದಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಹೊರಟ ಬಿಜೆಪಿ ನಾಯಕರು, ಅದೇ ಮಾರ್ಗವಾಗಿ ಸಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಠಾಣೆಗೆ ಮುತ್ತಿಗೆ ಯತ್ನಿಸಿದ ನಾಯಕರನ್ನು ಪ ಪೊಲೀಸರು ತಡೆದರು.ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಶಾಸಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ಸಾಕ್ಷ್ಯ ಏನಿದೆ ಎಂದು ಮುಖಂಡರು ಪ್ರಶ್ನಿಸಿದರು. ಡಿವೈಎಸ್‌ಪಿ ಬಿ.ಎಸ್. ಬಸವರಾಜ್ ಹಾಗೂ ಶರಣ ಬಸವೇಶ್ವರ ಅವರೊಂದಿಗೆ ಏರು ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಕ್ರಮ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಬಳಿಕವೂ ಮಣ್ಣು ಅಕ್ರಮ ಸಾಗಣೆ ಮುಂದುವರಿದಿದೆ. ಲಾರಿ, ಜೆಸಿಬಿ ವಶಕ್ಕೆ ಪಡೆದಿಲ್ಲ. ಸರ್ಕಾರಿ ಆಸ್ತಿ ತಮ್ಮ ಸ್ವಂತದ್ದು ಎಂಬಂತೆ ವರ್ತಿಸುತ್ತಿದ್ದಾರೆ. ಡಿಸಿ ಮತ್ತು ಎಸ್‌ಪಿಯೇ ಮೊದಲ ಕಳ್ಳರು. ಸಚಿವರೇ ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೂ ಪ್ರಕರಣ ದಾಖಲು ಮಾಡಬೇಕು
-ಶಾಸಕ ಬಿ.ಪಿ.ಹರೀಶ್
ಶಾಸಕ ಹರೀಶ ಅವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಜಾತಿ ನಿಂದನೆ ಪ್ರಕರಣ ಸಿಆರ್‌ಇಸಿ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಪೊಲೀಸರು ಹೇಳಿದರು. ಇದರಿಂದ ಆಕ್ರೋಶಗೊಂಡ ಶಾಸಕ ಬಿ.ಪಿ.ಹರೀಶ್, ಮಣ್ಣು ಅಕ್ರಮ ಸಾಗಣೆ ಮಾಡಿದ ಸ್ಥಳ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಬರುತ್ತದೆ. ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ. ದಾಖಲೆ ಸಮೇತ ದೂರು ನೀಡಿದರೂ ಪ್ರಕರಣ ದಾಖಲು ಮಾಡಿಲ್ಲ. ಆಗ ನಾಬೇ ಹೋಗಿ ರೆಡ್ ಹ್ಯಾಂಡ್ ಆಗಿ ಹಿಡಿದರೂ ಪೊಲೀಸರರು ಪ್ರಕರಣ ದಾಖಲಿಸಿಲ್ಲ. ಆದರೆ, ನನ್ನ ವಿರುದ್ಧ ಜಾತಿ ನಿಂದನೆ ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ. ಇದಕ್ಕೆ ಸಾಕ್ಷ್ಯ ಏನಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಣ್ಣು ಅಕ್ರಮ ಸಾಗಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ದಾಖಲೆ ನನ್ನ ಬಳಿ ಇವೆ. ಇದನ್ನು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದರೂ ಕಾನೂನು ಕ್ರಮ ಕೈಗೊಂಡಿಲ್ಲ. ಇದಕ್ಕೆ ಪೊಲೀಸ್ ಇಲಾಖೆಯ ಉತ್ತರ ಪಡೆಯದೇ ತೆರಳುವುದಿಲ್ಲ. ಜಿಲ್ಲಾಡಳಿತ ಭ್ರಷ್ಟರ ರಕ್ಷಣೆಗೆ ನಿಂತಿದೆ. ಇಡೀ ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರ ಗುಲಾಮರಂತೆ ವರ್ತನೆ ಮಾಡುತ್ತಿದೆ. ನೀವು ಅವರ (ಜಿಲ್ಲಾ ಉಸ್ತುವಾರಿ ಸಚಿವ) ಮನೆ ಸೇವೆ ಮಾಡೋದಕ್ಕೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಬರಬೇಕು. ಕೇಸ್ ದಾಖಲಿಸಬೇಕು ಎಂದರು ಕಿಡಿಕಾರಿದರು.
ಶಾಸಕರ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ಕೈ ಬಿಡಬೇಕು. ಇದನ್ನು ವಿಧಾನಸೌಧದಲ್ಲಿ ಕೂಡ ಪ್ರಶ್ನೆ ಮಾಡುತ್ತೇವೆ. ಅಕ್ರಮ ಮಣ್ಣು, ಗಣಿಗಾರಿಕೆ, ಸಾಗಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲೇಬೇಕು
-ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ,
ದೂರು ಆಧರಿಸಿ ಶಾಸಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮಣ್ಣು ಅಕ್ರಮ ಸಾಗಣೆಕೆ ಕುರಿತು ಕೃಷಿ ಇಲಾಖೆ ಜ.12ರಂದು ನೀಡಿದ ದೂರು ಆಧರಿಸಿ ಮತ್ತೊಂದು ದೂರು ಪ್ರತ್ಯೇಕವಾಗಿ ದಾಖಲಾಗಿದೆ
-ಎಎಸ್ಪಿ ಪರಮೇಶ್ವರ ಹೆಗಡೆ
ಭಿನ್ನಮತ ಮರೆತು ಒಂದಾದದ ಬಿಜೆಪಿ; ರೇಣುಕಾಚಾರ್ಯ ಗೈರು
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಮಣ್ಣು ಅಕ್ರಮ ಗಣಿಗಾರಿಕೆ ಹಾಗೂ ಸಾಗಣೆ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರು ಲೋಕಸಭೆ ಬಳಿಕ ಉಂಟಾಗಿದ್ದ ಭಿನ್ನ ಮರೆತು ಒಂದಾಗಿ ಹೋರಾಟ ನಡೆಸುತ್ತಿದ್ದಾರೆ. ಜಿ.ಎಂ. ಸಿದ್ದೇಶ್ವರ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಒಂದಾಗಿ ಪ್ರತಿಭಟನೆ ನಡೆಸಿದರು.ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗೈರಾಗಿದ್ದರು.



