ದಾವಣಗೆರೆ: ವಿಶೇಷ ಚೇತನ ಮಕ್ಕಳಿಗೆ ವಸತಿಯುತ ಉಚಿತ ಶಾಲಾ ದಾಖಲಾತಿ ಪ್ರಾರಂಭದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿಗೆ 1 ನೇ ತರಗತಿ (8 ವರ್ಷ) ಯಿಂದ 10ನೇ ತರಗತಿ (10 ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಶಾಲಾ ದಾಖಲಾತಿ ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗಧಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬ್ರೈಲ್ ಲಿಪಿಯನ್ನು ಕಲಿಸಲಾಗುತ್ತದೆ. ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ ಡೈಲಿ ಲಿವಿಂಗ್ ಸ್ಕಿಲ್ , ಯೋಗ ಮೆಡಿಟೇಷನ್, ದೈಹಿಕ ಶಿಕ್ಷಣ ಸಂಗೀತ, ಡ್ಯಾನ್ಸ್, ಡ್ರಾಮ, ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಾಲೆಯ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯ ಅಧೀಕ್ಷಕರಾದ ಪ್ರಿಯದರ್ಶಿನಿ ದೂ. ಸಂ: 9035525959 ಯನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.



