ದಾವಣಗೆರೆ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ದಾವಣಗೆರೆ: ಕೆಎಸ್ ಆರ್ ಟಿಸಿ ವೋಲ್ವೋ, ಇ.ವಿ. ಪವರ್ ಪ್ಲಸ್, ನಾನ್ ಎಸಿ ಸ್ಲೀಪರ್ ಬಸ್ ದರ ಇಳಿಕೆ
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ದೂ.ಸಂ: 08022107705 ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕೆಂದು ಆಡಳಿತಧಿಕಾರಿ ಕಿರಣಕುಮಾರ್ ತಿಳಿಸಿದ್ದಾರೆ.



