ದಾವಣಗೆರೆ: ದಾವಣಗೆರೆ ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಏನು ಸಿಗಲಿದೆ..? ಈ ಬಗ್ಗೆ ನಮ್ಮ ಜಿಲ್ಲೆಯ ಪ್ರತಿನಿಧಿಗಳು ಸಿಎಂಗೆ ಏನು ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ…
ಈ ಬಗ್ಗೆ ಜಿಲ್ಲೆಯ ಬಿಜೆಪಿ ಆರು ಶಾಸಕರು, ಸಂಸದ ಜಿ.ಎಂ. ಸಿದ್ದೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಜಿಲ್ಲೆಗೆ ಬಜೆಟ್ ನಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದ ಜಿ.ಎಂ ಸಿದ್ದೇಶ್ವರ್, ದಾವಣಗೆರೆ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣ ಮಾಡಬೇಕು. ಕತ್ತಲಗೆರೆ ಕೃಷಿ ಕೇಂದ್ರವನ್ನು ಅಗ್ರಿಕಲ್ಚರ್ ಕಾಲೇಜ್ ಆಗಿ ಮಾರ್ಪಡು ಮಾಡಬೇಕು. ದಾವಣಗೆರೆ ಜಿಲ್ಲೆಗೆ ಕೆಎಂಎಫ್ ನ ಶಿವಮೊಗ್ಗ ಹಾಲು ಒಕ್ಕೂಡಟದಿಂದ ಬೇರ್ಪಡಿಸಿ, ಪ್ರತ್ಯೇಕ ಒಕ್ಕೂಟ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ . ಈ ನಮ್ಮ ಬೇಡಿಕೆಯಲ್ಲಿ ಸಿಎಂ ಯಾವುದನ್ನು ಪರಿಗಣಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.