ದಾವಣಗೆರೆ: ದಾವಣಗೆರೆ ತಾಲೂಕಿನ ಎಲೆಬೇತೂರು ಬಳಿ ಖಾಸಗಿ ಬಸ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಎದುರಿಗೆ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ, ಬಸ್ ಒಂದು ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿಯಾಗಿದೆ. ಬಸ್ ರಸ್ತೆಯಿಂದ ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯೊಡೆದಿದೆ.
ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ವಿದ್ಯುತ್ ಪೂರೈಕೆ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.