ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದೆ.
ದಾವಣಗೆರೆ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಬಳಿ
ಸಾರಿಗೆ ಬಸ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು (ಮೇ 24) ಮಧ್ಯಾಹ್ನ ಈ ಘಟನೆ ನಡೆದಿದೆ. ದಾವಣಗೆರೆಯಿಂದ ಹಾಲೇಕಲ್ ಗ್ರಾಮಕ್ಕೆ ಬಸ್ ಸಂಚರಿಸುತ್ತಿತ್ತು. ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದರು.
ಬಸ್ ಗೆ ಕುರಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಅಣಜಿ ಆಸ್ಪತ್ರೆ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.



