Connect with us

Dvgsuddi Kannada | online news portal | Kannada news online

ದಾವಣಗೆರೆ ಬಳಿಯ ರಾಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ‌ ಗಾಯ

ದಾವಣಗೆರೆ

ದಾವಣಗೆರೆ ಬಳಿಯ ರಾಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ‌ ಗಾಯ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಡೆದಿದೆ. 5 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.

ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top