ದಾವಣಗೆರೆ: ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ksrtc ಬಸ್ ಹೆಬ್ಬಾಳ್ ಟೋಲ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಚಾಣಾಕ್ಷತನದಿಂದ ಭಾರೀ ಅನಾಹುತ ತಪ್ಪಿದೆ. ಚಾಲಕ ಸ್ವಲ್ಪ ನಿರ್ಲಕ್ಷ ವಹಿಸಿದ್ದರೂ ಬಸ್ ನಲ್ಲಿದ್ದ 40 ಪ್ರಯಾಣಿಕರಿಗೆ ಅಪಾಯ ಎದುರಾಗಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ಬಸ್ ಹೆಬ್ಬಾಳ್ ಟೋಲ್ ಗೇಟ್ ಬಳಿ ಬ್ರೇಕ್ ಫೇಲಾಗಿದೆ. ಆಗ ಚಾಲಕ ರಾಷ್ಟ್ರೀಯ ಹೆದ್ದಾರಿಯ ಚರಂಡಿ ಮೇಲೆ ಬಸ್ ಚಾಲನೆ ಮಾಡಿ ಬಸ್ ನಿಲ್ಲಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಅಪಘಾತದಲ್ಲಿ 12 ಮಂದಿಗೆ ಸಣ್ಣ ಗಾಯಗಳಾಗಿವೆ. ಗಾಯಗೊಂಡವರನ್ನು ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮುಂಭಾಗದ ಗ್ಲಾಸ್ ಒಡೆದಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ದಾವಣಗೆರೆ: ಹೊಸ ರಾಶಿ ಅಡಿಕೆ ದಿಢೀರ್ 3 ಸಾವಿರ ಕುಸಿತ; ಹಳೆಯ ಅಡಿಕೆ ಬೆಲೆಯಲ್ಲಿ ಸ್ವಲ್ಪ ಚೇತರಿಕೆ..!



