ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುರುರಾಜಪುರ ಗ್ರಾಮದಲ್ಲಿ ಕದ್ದಿದ್ದ 21ಕುರಿಗಳನ್ನು ಪಕ್ಕದ ಜಮೀನಿನಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ. ಗುರುರಾಜಪುರ ಗ್ರಾಮದ ಹನುಮಂತಪ್ಪ ಎಂಬುವರಿಗೆ ಸೇರಿದ 21 ಕುರಿಗಳನ್ನು ಯಾರೋ ಕಳ್ಳರು ಕದ್ದಿದ್ದಾರೆ ಎಂದು ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗ ಇನ್ನೊಬ್ಬರ ಜಮೀನಿನಲ್ಲಿ ಕುರಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ಆಗ ಪೊಲಿಸರು ಕುರಿ ವಶಕ್ಕೆ ಪಡೆದು ಕುರಿ ಮಾಲೀಕನಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.



