ದಾವಣಗೆರೆ: ಇಂದು (ಜೂ.19) ಬೆಳ್ಳಂಬೆಳಗ್ಗೆ ಸರಣಿ ಅಪಘಾತ ನಡೆದಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಅತೀ ವೇಗವಾಗಿ ಕಾರು ಚಾಲನೆಯ ಪರಿಣಾಮ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆ ವೃತ್ತ ಬಳಿ ಬೈಕ್ ಮತ್ತು ವೃತ್ತಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ಡ್ರೈವ್ ಮಾಡುತ್ತಿದ್ದ ಕಾರು, ಮೊದಲು ಬೈಕ್ ಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದಲ್ಲಿರುವ ಕಾರ್ ಶೋರೂಂಗೆ ನುಗ್ಗಿದೆ. ಈ ಪರಿಣಾಮ ಮಣಿ ಸರ್ಕಾರ್ ಗಾಯಗೊಂಡಿದ್ದು, ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಬೈಕ್ ಸವಾರ ಸಹ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆ: ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ#davangere #Accident #dvgsuddi pic.twitter.com/0J0rrg7VoV
— DVG Suddi (@dvg_suddi) June 19, 2024



