ದಾವಣಗೆರೆ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ರಾಜೇಶ್ (45) ಮೃತಪಟ್ಟ ವ್ಯಕ್ತಿ. ದಾವಣಗೆರೆ ಹಾಗೂ ಬೀರೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರಾಜ್ಯ ಹೆದ್ದಾರಿಯಾಗಿದ್ದರೂ ಗ್ರಾಮದ ಬಳಿ ಹಂಪ್ಸ್ ಹಾಕದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರತಿಭಟನಕಾರನ್ನು ಚದುರಿಸಿದರು.



